ನವದೆಹಲಿ: ಶಕ್ತಿ ಕೇಂದ್ರವಾದ ಖರ್ಗೆ ನಿವಾಸ, ರಾಹುಲ್, ಕರ್ನಾಟಕ ಶಾಸಕರ ದೌಡು!

ಕರ್ನಾಟಕದ ಮುಂದಿನ ಸಿಎಂ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಮಾತುಕತೆ ನಡೆಯುತ್ತಿರುವಂತೆಯೇ, ರಾಹುಲ್ ಗಾಂಧಿ ಸೇರಿದಂತೆ  ಹೊಸದಾಗಿ ಆಯ್ಕೆಯಾದ ಶಾಸಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಿವಾಸ
ಮಲ್ಲಿಕಾರ್ಜುನ ಖರ್ಗೆ ನಿವಾಸ

ನವದೆಹಲಿ: ಕರ್ನಾಟಕದ ಮುಂದಿನ ಸಿಎಂ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಮಾತುಕತೆ ನಡೆಯುತ್ತಿರುವಂತೆಯೇ ರಾಷ್ಟ್ರ ರಾಜಧಾನಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಶಕ್ತಿ ಕೇಂದ್ರವಾಗಿ ಪರಿಣಮಿಸಿದೆ. ರಾಹುಲ್ ಗಾಂಧಿ ಸೇರಿದಂತೆ  ಹೊಸದಾಗಿ ಆಯ್ಕೆಯಾದ ಶಾಸಕರು ಪಕ್ಷದ ರಾಜಾಜಿ ಮಾರ್ಗ 10ರಲ್ಲಿರುವ ಖರ್ಗೆ ನಿವಾಸಕ್ಕೆ ದೌಡಾಯಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೂಡಾ ರಾಜ್ಯದಲ್ಲಿ ಸರ್ಕಾರ ರಚನೆ ವಿಚಾರವಾಗಿ ಕೇಂದ್ರದ ವರಿಷ್ಠರೊಂದಿಗೆ ಚರ್ಚಿಸಲು ಖರ್ಗೆ ನಿವಾಸಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿರುವ  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಚರ್ಚೆಗಾಗಿ ದೆಹಲಿಗೆ ಕರೆದಿದ್ದಾರೆ. 

ಡಿಕೆ ಶಿವಕುಮಾರ್ ಅವರೊಂದಿಗೆ ಶಾಸಕರಾದ ಹೆಚ್. ಸಿ. ಬಾಲಕೃಷ್ಣ, ಹ್ಯಾರಿಸ್ ಮತ್ತಿತರ ಶಾಸಕರು ನವದೆಹಲಿಗೆ ಪ್ರಯಾಣಿಸಿದರು.

ಇದಕ್ಕೂ ಮುನ್ನಾ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ, ಚುನಾವಣೆಯಲ್ಲಿ ಪಕ್ಷ ಗೆದ್ದು ಬರುವಲ್ಲಿ ಡಿ. ಕೆ. ಶಿವಕುಮಾರ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಲಾಷೆ ಆಗಿದೆ. ನಾನು ಕೂಡಾ ಸಚಿವನಾಗಬೇಕೆಂಬುದು ಕ್ಷೇತ್ರದ ಜನರ ಬಯಕೆಯಾಗಿದೆ. ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದರು.

ಇನ್ನೂ ಸಿದ್ದರಾಮಯ್ಯ ಪರವಾಗಿ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ರಾಯರೆಡ್ಡಿ ಮತ್ತಿತರ ಶಾಸಕರು ನಿನ್ನೆಯಿಂದಲೂ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ವಿಜಯಾನಂದ ಕಾಶಪ್ಪನವರ್  ಮತ್ತಿತರ ಹಲವು ಶಾಸಕರು ಖರ್ಗೆ ನಿವಾಸಕ್ಕೆ ದೌಡಾಯಿಸಿದ್ದು, ಬಹುತೇಕವಾಗಿ ಇಂದು ಸಿಎಂ ಆಯ್ಕೆಯಾಗುವ ಸಾಧ್ಯತೆಯಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com