ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮಿಶ್ರಾ, ವಿಶ್ವನಾಥನ್ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್...
Published: 16th May 2023 08:15 PM | Last Updated: 16th May 2023 08:15 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರನ್ನು ಸುಪ್ರೀಂ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಕೊಲಿಜಿಯಂನ ಶಿಫಾರಸನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡರೆ, ವಿಶ್ವನಾಥನ್ ಅವರು ಆಗಸ್ಟ್ 11, 2030 ರಂದು ನಿವೃತ್ತಿಯಾಗಲಿರುವ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರ ನಂತರ, ಭಾರತದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಮತ್ತು ಮೇ 25, 2031 ರವರೆಗೆ ಅವರು ಅಧಿಕಾರದಲ್ಲಿ ಇರುತ್ತಾರೆ.
ಇದನ್ನು ಓದಿ: ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರ
ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಬಲವನ್ನು ಹೊಂದಿದೆ ಮತ್ತು ಪ್ರಸ್ತುತ 32 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಐದು ಸದಸ್ಯರ ಕೊಲಿಜಿಯಂ ಹೇಳಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ದಿನೇಶ್ ಮಹೇಶ್ವರಿ ಮತ್ತು ಎಂಆರ್ ಶಾ ಅವರು ಕಳೆದ ವಾರ ನಿವೃತ್ತರಾಗಿದ್ದಾರೆ.