ತೈಲ ಕಾರ್ಖಾನೆಯಲ್ಲಿ ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!

ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಟಾ: ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ.

ಸೋಮವಾರ ಸಂಜೆ ಐದು ಮಂದಿ ಆಯಿಲ್ ಫ್ಯಾಕ್ಟರಿಯ ವಾಟರ್ ಫಿಲ್ಟರ್ ಪ್ಲಾಂಟ್‌ನಿಂದ ಕೊಳಕು ನೀರನ್ನು ಸಾಗಿಸುವ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ರಾನ್‌ಪುರ ವೃತ್ತದ ಅಧಿಕಾರಿ (ಸಿಒ) ಬಲ್ವೀರ್ ಸಿಂಗ್ ಹೇಳಿದ್ದಾರೆ. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಉಸಿರು ಚೆಲ್ಲದ್ದರೆ, ಮೂವರು ಪ್ರಜ್ಞಾಹೀನರಾಗಿದ್ದರು ಎಂದು ಅವರು ಹೇಳಿದರು.

ನಿಗದಿತ ಸಮಯಕ್ಕೆ ಐವರು ಟ್ಯಾಂಕ್‌ನಿಂದ ಹೊರಬಾರದಿದ್ದಾಗ ಇತರ ಸಿಬ್ಬಂದಿ ಅಪಾಯವನ್ನು ಅರಿತು ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಲೋಕೇಶ್ (28) ಮತ್ತು ರಾಮರತನ್ (30) ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇತರ ಮೂವರು ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ ಎಂದು ಸಿಒ ಹೇಳಿದರು.

ತೈಲ ಕಾರ್ಖಾನೆಯ ಸಂಪೂರ್ಣ ನಿರ್ವಹಣೆಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 304 (ನಿರ್ಲಕ್ಷ್ಯದಿಂದ ಸಾವು) ಮತ್ತು 336 (ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಯಿದೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು SC/ST ಕಾಯಿದೆಯ ಸೆಕ್ಷನ್ 3ರ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದರು.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ಮತ್ತು ಮರಣೋತ್ತರ ಪರೀಕ್ಷೆಯ ನಂತರ ಕಾರ್ಮಿಕರಿಬ್ಬರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com