ಮಹಾರಾಷ್ಟ್ರದಲ್ಲಿ 'ಗಲಭೆಗಳ ಪ್ರಯೋಗಾಲಯ' ಸ್ಥಾಪಿಸಲು ಬಿಜೆಪಿ ಯತ್ನ: ಶಿವಸೇನೆ (ಯುಬಿಟಿ) ಆರೋಪ

ಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ.

ಈ ಕುರಿತು ತನ್ನ ಮುಖವಾಣಿ 'ಸಾಮ್ನಾ' ಸಂಪಾದಕೀಯದಲ್ಲಿ ಶಿವಸೇನಾ (ಯುಬಿಟಿ) ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ಬಿಜೆಪಿ ಬೆಂಬಲದಿಂದ ಏಕನಾಥ್ ಶಿಂಧೆ ಸಿಎಂ ಆದರು. ಸಂವಿಧಾನ, ರಾಷ್ಟ್ರೀಯ ಏಕತೆ ಮತ್ತು ಧಾರ್ಮಿಕ ಸಹಬಾಳ್ವೆಯನ್ನು ಬದಿಗೊತ್ತಿ ಅಧಿಕಾರಕ್ಕಾಗಿ ಹಾತೊರೆಯುವವರು ರಾಜ್ಯವನ್ನು ಸುತ್ತುವರೆದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನರು ಎಚ್ಚರದಿಂದಿರಬೇಕು ಎಂದು ಹೇಳಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಶನಿವಾರ ಮತ್ತು ಭಾನುವಾರ ಎರಡು ಪ್ರತ್ಯೇಕ ಕೋಮು ಸಂಘರ್ಣಗಳು ನಡೆದಿವೆ.ಅಕೋಲಾ ನಗರ ಮತ್ತು ಅಹ್ಮದ್‌ನಗರ ಜಿಲ್ಲೆಯ ಶೇವಗಾಂವ್ ಗ್ರಾಮದಲ್ಲಿ ಕೋಮು ಘರ್ಷಣೆಗಳು ನಡೆದಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, 13 ಮಂದಿ ಗಾಯಗೊಂಡಿದ್ದಾರೆ.

ನಾಸಿಕ್ ಜಿಲ್ಲೆಯ ಪ್ರಸಿದ್ಧ ತ್ರಯಂಬಕೇಶ್ವರ ದೇವಸ್ಥಾನಕ್ಕೆ ವಿವಿಧ ಧರ್ಮದ ಸದಸ್ಯರು ಬಲವಂತವಾಗಿ ನುಗ್ಗಲು ಯತ್ನಿಸಿದ್ದು, ಇದರ ಬಗ್ಗೆ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ಗಳನ್ನು ರಚನೆ ಮಾಡಿದೆ.

ಈ ಕೋಮು ಸಂಘರ್ಷಗಳ ಕುರಿತು ಶಿವಸೇನೆ (ಯುಬಿಟಿ) ಬಿಜೆಪಿ ವಿರುದ್ಧ ಕಿಡಿಕಾರಿದೆ. ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯವು ಧಾರ್ಮಿಕ ಮತ್ತು ಸಾಮಾಜಿಕ ಉದ್ವಿಗ್ನತೆಗೆ ಸಾಕ್ಷಿಯಾಗಿದೆ. "ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಅದರ ಬೆಂಬಲಿಗರು ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ, ಗಲಭೆಗಳ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಮತದಾರರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿದೆ.

"ಕೆಲವು ಸಮಸ್ಯೆಗಳನ್ನು ಮಾತುಕತೆಗಳ ಮೂಲಕ ಪರಿಹರಿಸಬಹುದು, ಆದರೆ, ಬಿಜೆಪಿ ಸರ್ಕಾರ ರಚಿಸಲು ಶಿವಸೇನೆಯನ್ನು ಒಡೆದುಹಾಕಿತು. ಅದೇ ರೀತಿ ಸಮಾಜವನ್ನು ವಿಭಜಿಸುವ ಮೂಲಕ ಚುನಾವಣೆಯಲ್ಲಿ ಹೋರಾಡಲು ಬಯಸುತ್ತಿರುವಂತೆ ತೋರುತ್ತಿದೆ. ಅಕೋಲಾ, ಶೇವಗಾಂವ್ ಮತ್ತು ನಾಸಿಕ್‌ನಲ್ಲಿ ಇತ್ತೀಚಿನ ಘಟನೆಗಳು ಕಳವಳಕ್ಕೆ ಕಾರಣವಾಗಿವೆ ಎಂದು ಹೇಳಿದೆ.

ರಾಜಕೀಯ ಉದ್ದೇಶಗಳೊಂದಿಗೆ ಉದ್ದೇಶಪೂರ್ವಕವಾಗಿ ಸಾಮಾಜಿಕ ಉದ್ವಿಗ್ನತೆಯನ್ನು ಸೃಷ್ಟಿಸಲಾಗುತ್ತಿದೆ. ಇದನ್ನು ವ್ಯವಸ್ಥಿತವಾಗಿ ಮತ್ತು ಯೋಜಿತ ರೀತಿಯಲ್ಲಿ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಘರ್ಷಣೆಗಳ ಮಾಸ್ಟರ್‌ಮೈಂಡ್‌ಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದರು. ಆದರೆ, ಏನೂ ಆಗಿಲ್ಲ ಎಂದು ಕಿಡಿಕಾರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com