ಸಮೀರ್ ವಾಂಖೆಡೆ
ಸಮೀರ್ ವಾಂಖೆಡೆ

ಲಂಚ ಪ್ರಕರಣ: ಸಿಬಿಐ ವಿಚಾರಣೆಗೆ ಸಮೀರ್ ವಾಂಖೆಡೆ ಗೈರು

ನಾರ್ಕೊಟಿಕ್ಸ್ ನಿಯಂತ್ರಣ ವಿಭಾಗದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. 

ಮುಂಬೈ: ನಾರ್ಕೊಟಿಕ್ಸ್ ನಿಯಂತ್ರಣ ವಿಭಾಗದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. 

ಬಾಲಿವುಡ್ ನಟ ಶಾರೂಖ್ ಖಾನ್ ನಿಂದ 25 ಕೋಟಿ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇದಾಗಿದೆ. 

2021 ರಲ್ಲಿ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಡ್ರಗ್ ಪ್ರಕರಣದಲ್ಲಿ ಸಿಲುಕದಂತೆ ನೋಡಿಕೊಳ್ಳುವುದಕ್ಕಾಗಿ 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪ ವಾಂಖೆಡೆ ವಿರುದ್ಧ ಕೇಳಿಬಂದಿದೆ. ಆರ್ಯನ್ ಖಾನ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎನ್‌ಸಿಬಿ ತನ್ನ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ.

ವಾಂಖೆಡೆ ಗುರುವಾರ ವಿಚಾರಣೆಗೆ ಹಾಜರಾಗಲಿಲ್ಲ ಮತ್ತು ಮುಂದಿನ ಕ್ರಮದ ಬಗ್ಗೆ ಕೇಂದ್ರೀಯ ತನಿಖಾ ದಳ ನಿರ್ಧರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com