ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಮಕ್ಸಿ ಪಟ್ಟಣದ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
Published: 18th May 2023 12:28 PM | Last Updated: 18th May 2023 12:28 PM | A+A A-

ಸಂಗ್ರಹ ಚಿತ್ರ
ಶಾಜಾಪುರ: ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಮಕ್ಸಿ ಪಟ್ಟಣದ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಮೃತರು ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಿಂದ ಅಹಮದಾಬಾದ್‌ಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಾಜಾಪುರದ ದೊಂಟ ಗ್ರಾಮದ ಬಳಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಜ್ಜಯಿನಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.