91ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ ದೇವೇಗೌಡ; ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
Published: 18th May 2023 10:56 AM | Last Updated: 18th May 2023 10:58 AM | A+A A-

ಹೆಚ್'ಡಿ.ದೇವೇಗೌಡ
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಹೆಚ್'ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್ ಡಿ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಪಕ್ಷದ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ‘ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ , ಮಾಜಿ ಪ್ರಧಾನಮಂತ್ರಿಗಳಾದ, ಸನ್ಮಾನ್ಯ ಶ್ರೀ ಹೆಚ್ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಅನುಗ್ರಹ ಸದಾ ಅವರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ. ನಾಡು, ನುಡಿ, ನೆಲ, ಜಲದ ಬಗೆಗೆ ಅವರಿಗಿರುವ ಕಾಳಜಿ ಹಾಗೂ ಜವಾಬ್ದಾರಿಯುತ ನಡೆ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದ್ದಾರೆ.