ಬಿಜೆಪಿ ಚುನಾವಣೆಯಲ್ಲಿ ಸೋತಿದ್ದೇಕೆ? ಪಕ್ಷದಲ್ಲಿ ಎಷ್ಟು ಒಡಕಿದೆ ಎಂಬುದರತ್ತ ಅದು ಯೋಚಿಸಬೇಕು: ಪ್ರಿಯಾಂಕ್ ಖರ್ಗೆ
ಸರ್ಕಾರ ರಚನೆಯಲ್ಲಿ ವಿಳಂಬ ಹಾಗೂ ಕಾಂಗ್ರೆಸ್ ಗ್ಯಾರಂಟಿ ಭರವಸೆ ಕುರಿತು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಚಿತ್ತಾಪುರದಿಂದ ಆಯ್ಕೆಯಾಗಿರುವ ನೂತನ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
Published: 19th May 2023 05:34 PM | Last Updated: 19th May 2023 08:15 PM | A+A A-

ಪ್ರಿಯಾಂಕ್ ಖರ್ಗೆ
ನವದೆಹಲಿ: ಸರ್ಕಾರ ರಚನೆಯಲ್ಲಿ ವಿಳಂಬ ಹಾಗೂ ಕಾಂಗ್ರೆಸ್ ಗ್ಯಾರಂಟಿ ಭರವಸೆ ಕುರಿತು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಚಿತ್ತಾಪುರದಿಂದ ಆಯ್ಕೆಯಾಗಿರುವ ನೂತನ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು ಏಕೆ, ಆ ಪಕ್ಷದಲ್ಲಿ ಎಷ್ಟು ಒಡಕಿದೆ ಎಂಬುದರತ್ತ ಯೋಚಿಸಬೇಕಾಗಿದೆ. ಕರ್ನಾಟಕದ ಜನರು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ ಎಂದರು.
ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಕೊಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯೊಂದಿಗೆ ಮಾತುಕತೆ ನಡೆಸಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ನಂತರ ಅವರು ಅದನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಹಸ್ತಾಂತರಿಸಲಿದ್ದಾರೆ ಎಂದು ಅವರು ತಿಳಿಸಿದರು.
Delhi | The nominated CM and Deputy CM have come to take the final decision on the Council of Ministers. After having words with the general secretary in-charge and preparing final list, they will take it to Congress president. BJP should think about why they lost the election… pic.twitter.com/EoZ4kBGwwd
— ANI (@ANI) May 19, 2023