ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಶೇಕಡಾ 99.70 ರಷ್ಟು ಉತ್ತೀರ್ಣ

ಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್‌ಎಸ್‌ಎಲ್‌ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್‌ಎಸ್‌ಎಲ್‌ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

ಇಂದು ತಿರುವನಂತಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಕೇರಳ ಸಾಮಾನ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದರು.

ಮಾರ್ಚ್‌ನಲ್ಲಿ ಕೇರಳ, ಲಕ್ಷದ್ವೀಪ ಮತ್ತು ಗಲ್ಫ್ ಪ್ರದೇಶದ ವಿವಿಧ ಕೇಂದ್ರಗಳಲ್ಲಿ ನಡೆದ ಸಾಮಾನ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 4,19,128 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಒಟ್ಟು 4,19,128 ವಿದ್ಯಾರ್ಥಿಗಳ ಪೈಕಿ 4,17,864 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಕೇರಳ ಶಿಕ್ಷಣ ಸಚಿವರು ಹೇಳಿದ್ದಾರೆ.

ಕಳೆದ ವರ್ಷ 99.26 ರಷ್ಟಿದ್ದ ಎಸ್ಎಸ್ಎಲ್ ಸಿ ಫಲಿತಾಂಶ ಈ ವರ್ಷ ಶೇ. 99.70ಕ್ಕೆ ಹೆಚ್ಚಿದೆ ಎಂದು ಶಿವನ್ ಕುಟ್ಟಿ ತಿಳಿಸಿದ್ದಾರೆ.

ಒಟ್ಟು 68,604 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಪೂರ್ಣ A+ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com