ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ.
Published: 19th May 2023 04:34 PM | Last Updated: 19th May 2023 04:37 PM | A+A A-

ಕುಸ್ತಿಪಟುಗಳನ್ನು ಭೇಟಿಯಾದ ಸಚಿನ್ ಪೈಲಟ್
ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ.
#WATCH | Congress leader Sachin Pilot arrives at Jantar Mantar in Delhi to meet the wrestlers who are protesting against WFI (Wrestling Federation of India) president Brij Bhushan Sharan Singh. pic.twitter.com/WprHbtY3G6
— ANI (@ANI) May 19, 2023
ಇದನ್ನೂ ಓದಿ: ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಮುಂದಾದ ಕುಸ್ತಿಪಟುಗಳು: ವಿದೇಶಿ ಒಲಿಂಪಿಯನ್‌ಗಳ ಸಂಪರ್ಕ
ನಂತರ ಮಾತನಾಡಿದ ಅವರು, ದೇಶವನ್ನು ಹೆಮ್ಮೆಪಡುವಂತೆ ಮಾಡಿದವರಿಗೆ ನ್ಯಾಯದಾನ ಏಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು. ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಆಡಳಿತ ಮತ್ತು ಪೊಲೀಸರು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.