ಪಂಜಾಬ್ ನಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಯೋಧರು!

ಗಡಿ ಭದ್ರತಾ ಪಡೆಯ ಯೋಧರು ಪಂಜಾಬ್ ನಲ್ಲಿ ಪಾಕಿಸ್ತಾನದ ಡ್ರೋನ್ ನ್ನು ಹೊಡೆದುರುಳಿಸಿದ್ದಾರೆ.
ಪಂಜಾಬ್
ಪಂಜಾಬ್

ಪಂಜಾಬ್: ಗಡಿ ಭದ್ರತಾ ಪಡೆಯ ಯೋಧರು ಪಂಜಾಬ್ ನಲ್ಲಿ ಪಾಕಿಸ್ತಾನದ ಡ್ರೋನ್ ನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನದಿಂದ ವಾಯುಗಡಿ ಉಲ್ಲಂಘನೆ ಮಾಡಿ ಬಂದ ಡ್ರೋನ್ ಇದಾಗಿತ್ತು ಎಂದು ತಿಳಿದುಬಂದಿದೆ.

 ಅಮೃತ್ ಸರ ಸೆಕ್ಟರ್ ನಲ್ಲಿ ಈ ಘಟನೆ ವರದಿಯಾಗಿದ್ದು, ಶೋಧಕಾರ್ಯಾಚರಣೆಯಲ್ಲಿ ಡ್ರೋನ್ ನ್ನು ವಶಕ್ಕೆ ಪಡೆಯಲಾಗಿದೆ. ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ತಿಳಿಸಿದೆ.

ಈ ಹಿಂದೆ ಜನವರಿ ತಿಂಗಳಲ್ಲಿ ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ಯತ್ನಿಸಿದ ಪಾಕಿಸ್ತಾನದ ಡ್ರೋನ್ ನ್ನು ಇದೇ ಮಾದರಿಯಲ್ಲಿ ಬಿಎಸ್​ಎಫ್ ಹೊಡೆದುರುಳಿಸಿತ್ತು. ಆಗ ಚೀನಾ ನಿರ್ಮಿತ ಪಿಸ್ತೂಲ್‌ಗಳು ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com