ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?

ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 
ನೂತನ ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ(ಸಂಗ್ರಹ ಚಿತ್ರ)
ನೂತನ ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ(ಸಂಗ್ರಹ ಚಿತ್ರ)

ನವದೆಹಲಿ: ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ದೆಹಲಿಯಿಂದ ಇಂದು ಬೆಂಗಳೂರಿಗೆ ನೂತನ ಸಿಎಂ-ಡಿಸಿಎಂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಇಂದು ಸಿಎಂ-ಡಿಸಿಎಂ ಜೊತೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com