ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ...
Published: 22nd May 2023 08:27 PM | Last Updated: 22nd May 2023 08:50 PM | A+A A-

ಯೋಗಿ ಆದಿತ್ಯನಾಥ
ನವದೆಹಲಿ: 45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
ತನ್ನ ಅಪ್ರಾಪ್ತ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಒತ್ತಡ ಹಾಕಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಎನ್ಎಚ್ಆರ್ ಸಿ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಎನ್ಎಚ್ಆರ್ ಸಿ ಸೂಚಿಸಿದೆ.
ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ತನ್ನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ಎಸಗಿದ ದುಷ್ಕರ್ಮಿಗಳೊಂದಿಗೆ ಪೊಲೀಸರು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸಿದ ನಂತರ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ಎನ್ಎಚ್ಆರ್ ಸಿ ನೋಟಿಸ್ ನೀಡಿದೆ.
ಇದನ್ನು ಓದಿ: ನದಿಯಲ್ಲಿ ದೋಣಿ ಮುಳುಗಿ ಅವಘಡ: ಜಾತ್ರೆಗೆ ತೆರಳುತ್ತಿದ್ದ ನಾಲ್ವರು ಮಹಿಳೆಯರು ಸಾವು, ಹಲವರು ನಾಪತ್ತೆ
ಸಂತ್ರಸ್ತ ಬಾಲಕಿ ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ.
"ಮಾಧ್ಯಮ ವರದಿಯ ವಿಷಯಗಳು ನಿಜವಾಗಿದ್ದರೆ, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂಬುದನ್ನು ಆಯೋಗ ಗಮನಿಸಿದ್ದು, ಅದರ ಪ್ರಕಾರ, ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ಸೂಚಿಸಲಾಗಿದೆ ” ಎಂದು ಎನ್ಎಚ್ಆರ್ ಸಿ ಪ್ರಕಟಣೆಯಲ್ಲಿ ತಿಳಿಸಿದೆ.