ಕುಸ್ತಿಪಟುಗಳ ಬೆಂಬಲಿಸಿ ಜೆಎನ್‌ಯು ವಿದ್ಯಾರ್ಥಿಗಳು, ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ...
Published: 23rd May 2023 12:55 AM | Last Updated: 23rd May 2023 12:55 AM | A+A A-

ಪ್ರತಿಭಟನಾನಿರತ ಕುಸ್ತಿಪಟುಗಳು.
ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಡೆಸಿದ ಪ್ರತಿಭಟನೆಯಲ್ಲಿ ಕುಸ್ತಿಪಟು ಸಾಕ್ಷಿ ಮಲಿಕ್ ಭಾಗಿಯಾಗಿದ್ದರು.
ಇದನ್ನು ಓದಿ: ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ ಜಂಟಿಯಾಗಿ ಕ್ಯಾಂಪಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಿದ್ದವು.
“ಇಂದು ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕ್ಯಾಂಪಸ್‌ನೊಳಗೆ ಜೆಎನ್‌ಯುಎಸ್‌ಯು ಮತ್ತು ಜೆಎನ್‌ಯುಟಿಎ ಆಯೋಜಿಸಿದ್ದ ಒಗ್ಗಟ್ಟಿನ ಸಮಾವೇಶದಲ್ಲಿ ಭಾಗವಹಿಸಿದ್ದರು. ನಾಳೆ (ಮಂಗಳವಾರ) ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್‌ಲೈಟ್ ಮೆರವಣಿಗೆ ನಡೆಸಲಾಗುವುದು" ಎಂದು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.