ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾ

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

ಜೈಲಿನೊಳಗೆ ಸಿಸೋಡಿಯಾ ಅವರಿಗೆ ಪುಸ್ತಕಗಳ ಜೊತೆಗೆ ಕುರ್ಚಿ ಮತ್ತು ಟೇಬಲ್ ನೀಡುವುದನ್ನು ಪರಿಗಣಿಸುವಂತೆ ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸೂಚಿಸಿದರು.

ಸಿಸೋಡಿಯಾ ಅವರನ್ನು ನ್ಯಾಯಾಲಯದಿಂದ ಹೊರಗೆ ಕರೆತರುವಾಗ, ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಉಲ್ಲೇಖಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಗೆ 'ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮೋದಿ ತುಂಬಾ ದುರಹಂಕಾರಿಯಾಗಿದ್ದಾರೆ' ಎಂದು ಹೇಳಿದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರು ಸಿಬಿಐ ಮತ್ತು ಇ.ಡಿ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com