ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವರಾದ ಅನುರಾಗ್ ಠಾಕೂರ್ ಮತ್ತು ಜಿ ಕಿಶನ್ ರೆಡ್ಡಿ ಅವರೊಂದಿಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವರಾದ ಅನುರಾಗ್ ಠಾಕೂರ್ ಮತ್ತು ಜಿ ಕಿಶನ್ ರೆಡ್ಡಿ ಅವರೊಂದಿಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ.
Updated on

ನವದೆಹಲಿ: ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ ಅವರು, ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಮೇ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿರುವ ನೂತನ ಸಂಸತ್ ಭವನದಲ್ಲಿ ಅದನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಆಗ ಏಕೆ ನೀಡಲಾಯಿತು ಮತ್ತು ಈಗ ಏಕೆ ಸ್ಥಾಪಿಸಲಾಗುತ್ತಿದೆ ಎಂಬುದರ ಉದ್ದೇಶ ಸ್ಪಷ್ಟವಾಗಿದೆ ಎಂದು ಇದೇ ವೇಳೆ ಅಮಿತ್ ಶಾ ಅವರು ಮಾರ್ಮಿಕವಾಗಿ ನುಡಿದಿದ್ದಾರೆ.

ಅಧಿಕಾರ ಹಸ್ತಾಂತರವು ಕೇವಲ ಕೈಕುಲುಕುವುದು ಅಥವಾ ದಾಖಲೆಗಳಿಗೆ ಸಹಿ ಮಾಡುವುದು ಮಾತ್ರವಲ್ಲ. ಆಧುನಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಂಪ್ರದಾಯಗಳೊಂದಿಗೆ ಸಂಪರ್ಕ ಹೊಂದಿರಬೇಕು. ‘ಜವಾಹರಲಾಲ್ ನೆಹರು ಅವರು ಆಗಸ್ಟ್ 14, 1947ರಂದು ಅನುಭವಿಸಿದ ಅದೇ ಭಾವನೆಯನ್ನು ಸೆಂಗೋಲ್ ಪ್ರತಿನಿಧಿಸುತ್ತದೆ’ ಎಂದು ತಿಳಿಸಿದರು.

ನೂತನ ಸಂಸತ್ ಕಟ್ಟಡವು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಉದಾಹರಣೆಯಾಗಿದೆ. ಉದ್ಘಾಟನೆಯ ದಿನದಂದು 7,000 ಕಾರ್ಮಿಕರನ್ನು (ಶ್ರಮ ಯೋಗಿಗಳು) ಪ್ರಧಾನ ಮಂತ್ರಿ ಗೌರವಿಸಲಿದ್ದಾರೆ. ತಮ್ಮ ಬುದ್ಧಿವಂತಿಕೆಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸ್ವತಂತ್ರವಾಗಿರುವ ಎಲ್ಲಾ ರಾಜಕೀಯ ಪಕ್ಷಗಳಿಗೂ ಹೊಸ ಸಂಸತ್ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಏತನ್ಮಧ್ಯೆ, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ 19 ವಿರೋಧ ಪಕ್ಷಗಳು ತೆಗೆದುಕೊಂಡ ನಿರ್ಧಾರವು "ದುರದೃಷ್ಟಕರ" ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಹೇಳಿದ್ದಾರೆ ಮತ್ತು ತಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

ಈ ನಡುವೆ ನೂತನ ಸಂಸತ್ ಭವನವನ್ನು ಉದ್ಘಾಟನೆ ಬಹಿಷ್ಕರಿಸಿರುವ 19 ವಿಪಕ್ಷಗಳು ತಮ್ಮ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಪ್ರವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಒತ್ತಾಯಿಸಿದ್ದಾರೆ.

ಬಹಿಷ್ಕಾರಿಸುವುದು, ಸಮಸ್ಯೆಯಿಲ್ಲದ ವಿಚಾರಗಳ ಸಮಸ್ಯೆ ಸೃಷ್ಟಿಸುತ್ತಿರುವುದು ಅತ್ಯಂತ ದುರದೃಷ್ಟಕರ. ವಿಪಕ್ಷಗಳು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ತಿಳಿಸಿದರು.

ಲೋಕಸಭೆ ಸ್ಪೀಕರ್ ಸಂಸತ್ತಿನ ಉಸ್ತುವಾರಿ ಮತ್ತು ಕಟ್ಟಡವನ್ನು ಉದ್ಘಾಟಿಸಲು ಪ್ರಧಾನಿಯವರಿಗೆ ಆಹ್ವಾನ ನೀಡಿದ್ದಾರೆಂದು ಇದೇ ವೇಳೆ ಪ್ರಹ್ಲಾದ ಜೋಶಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com