
ಉರುಳಿಬಿದ್ದಿರುವ ವಾಹನ.
ಕಿಶ್ತ್ವಾರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸಾವು-ನೋವು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ರಜೌರಿ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!
ಈ ಸ್ಥಳದಲ್ಲಿ ಆಗಾಗ್ಗೆ ಹೆಚ್ಚಾಗಿ ಅಪಘಾತ ಸಂಭವಿಸುತ್ತದೆ. ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕರಿಯೊಬ್ಬರು ತಿಳಿಸಿದ್ದಾರೆ.