ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಕಾಂಗ್ರೆಸ್ ವಾರ್ ರೂಂನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ

ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಮುಂದೆ ರಾಜ್ಯ ನಾಯಕರ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.

ದೆಹಲಿಯ ಜಿಆರ್​ಜಿ ರಸ್ತೆಯಲ್ಲಿರುವ ಕಾಂಗ್ರೆಸ್ ವಾರ್ ರೂಮ್​ನಲ್ಲಿ ಬೆಳಗ್ಗೆ 11.30ರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆ ನಡೆಸಿದರು. ಸದ್ಯ ಸಿದ್ದರಾಮಯ್ಯ ಅವರು ಭೋಜನ ವಿರಾಮಕ್ಕಾಗಿ ಹೊರಬಂದಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾವಣೆಯಲ್ಲಿ ಪಕ್ಷವನ್ನು ಬಲವಾಗಿ ಬೆಂಬಲಿಸಿದ ಸಮುದಾಯಗಳ ಆಧಾರದ ಮೇಲೆ ಸಚಿವರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ ಕೆ ಶಿವಕುಮಾರ್ ಅವರನ್ನು ಮಾತ್ರ ಡಿಸಿಎಂ ಮಾಡಿರುವುದು ಪಕ್ಷದಲ್ಲಿ ಅನೇಕ ಹಿರಿಯ ಶಾಸಕರಿಗೆ ಅಸಮಾಧಾನ ತಂದಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com