social_icon

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

Published: 25th May 2023 04:14 PM  |   Last Updated: 25th May 2023 06:39 PM   |  A+A-


New_Parliement_Building1

ನೂತನ ಸಂಸತ್ ಕಟ್ಟಡ

Posted By : Nagaraja AB
Source : ANI

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ. 

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ. 

ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುತ್ತಿರುವುದೇಕೆ?: 19 ವಿಪಕ್ಷಗಳು ನೀಡಿರುವ ವಿವರಣೆ ಹೀಗಿದೆ...

ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. 


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • GN Raju

    Why is the opposition hell bent on opposing every move of the government?It is still in one's memory how the opposition, congress in particular,reacted to the early days of the president.now,they have gone too enamored of the president.when she was being considered for post,they should have realised that she has had a long list of academical, social, political and a string of appointments to her credit.the building will host all political activities of the elected representatives of the country,and,as such its inaugration by the most popular person and elected representative of the country would be appropriate,and will reflect the will and aspirations of the citizens.Such gimmicks by the opposition, including approaching the supreme court on frivolous grounds and wasting its time, will only alienate the opposition from the country,may sanity prevail GN Raju
    3 months ago reply
flipboard facebook twitter whatsapp