ಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ಚಿನ್ನದ 'ಸೆಂಗೊಲ್'; 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ರಾಜದಂಡ
ಕಳೆದ ಏಳು ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ಐತಿಹಾಸಿಕ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾಗುತ್ತಿದೆ.
Published: 25th May 2023 08:54 PM | Last Updated: 25th May 2023 08:54 PM | A+A A-

ಚಿನ್ನದ 'ಸೆಂಗೊಲ್
ಲಖನೌ: ಕಳೆದ ಏಳು ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ಐತಿಹಾಸಿಕ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾಗುತ್ತಿದೆ.
1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಾಗ ಅಧಿಕಾರದ ಹಸ್ತಾಂತರದ ಸಂಕೇತವಾಗಿ ಮೌಂಟ್ ಬ್ಯಾಟನ್ ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಚಿನ್ನದ ಸೆಂಗೋಲ್ ಅನ್ನು ನೀಡಿದ್ದರು. ಈ ಸೆಂಗೋಲ್ ಅನ್ನು 1950ರ ಉತ್ತರಾರ್ಧದಲ್ಲಿ ಅಲಹಾಬಾದ್ ಮ್ಯೂಸಿಯಂಗೆ ಸ್ಥಳಾಂತರಿಸಲಾಗಿತ್ತು.
ಇದನ್ನು ಓದಿ: ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಆರಂಭದಲ್ಲಿ ಇದನ್ನು ಅಲಹಾಬಾದ್ ಮ್ಯೂಸಿಯಂ ಕ್ಯುರೇಟರ್ ಎಸ್ ಸಿ ಕಲಾ ಅವರು ಸ್ವೀಕರಿಸಿದ್ದರು. ನೆಹರೂ ಅವರಿಗೆ ಉಡುಗೊರೆಯಾಗಿ ನೀಡಲಾದ ಸೆಂಗೋಲ್ ಮತ್ತು ಇತರ ವಸ್ತುಗಳನ್ನು ಭಾರತದ ಮೊದಲ ಪ್ರಧಾನಿಯವರ ಪೂರ್ವಜರ ನಿವಾಸವಾದ ಆನಂದ್ ಭವನದಿಂದ ಅಲಹಾಬಾದ್ ಮ್ಯೂಸಿಯಂಗೆ ಸ್ಥಳಾಂತರಿಸಲಾಗಿತ್ತು ಎಂದು ಮ್ಯೂಸಿಯಂ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರು, ಬ್ರಿಟಿಷರಿಂದ ಭಾರತಕ್ಕೆ ಅಧಿಕಾರದ ಹಸ್ತಾಂತರದ ಸಂಕೇತವಾಗಿ ರಾಜದಂಡ ‘ಸೆಂಗೋಲ್’ ಅನ್ನು ಸ್ವೀಕರಿಸುವಂತೆ ನೆಹರೂ ಅವರಿಗೆ ಸಲಹೆ ನೀಡಿದ್ದರು.
ಹೊಸ ಸಂಸತ್ತಿನ ಸ್ಪೀಕರ್ ಆಸನದ ಬಳಿ ಸೆಂಗೋಲ್ ಅನ್ನು ಸ್ಥಾಪಿಸಲಾಗುವುದು, ಏಕೆಂದರೆ ಇದು ಸಂಸ್ಕೃತಿ ಸಂಪ್ರದಾಯಗಳನ್ನು ಆಧುನಿಕತೆಯೊಂದಿಗೆ ಸಂಯೋಜಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕ್ರಿಸ್ತಪೂರ್ವ ಮೂರನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ ಮಹತ್ವ ಪಡೆದ ರಾಜದಂಡ ಇದಾಗಿದೆ. ಈ ರಾಜದಂಡದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಗೊತ್ತಾಗುತ್ತಿದ್ದಂತೆ ಅದನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲು ನಿರ್ಧರಿಸಿದರು. ಸೆಂಗೋಲ್ ಎಂದರೆ ತಮಿಳಿನ ಭಾಷೆಯಲ್ಲಿ ಸಮೃದ್ಧ ಸಂಪತ್ತು ಎಂದರ್ಥ ಎಂದು ಅಮಿತ್ ಶಾ ಹೇಳಿದ್ದಾರೆ.