3 ವರ್ಷಗಳ ಅವಧಿಯ ಪಾಸ್‌ಪೋರ್ಟ್ ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

ಮೂರು ವರ್ಷಗಳ ಅವಧಿಗೆ 'ಸಾಮಾನ್ಯ ಪಾಸ್‌ಪೋರ್ಟ್' ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮೂರು ವರ್ಷಗಳ ಅವಧಿಗೆ 'ಸಾಮಾನ್ಯ ಪಾಸ್‌ಪೋರ್ಟ್' ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮ ‘ಮೋದಿ’ ಕುರಿತು ನೀಡಿದ್ದ ಮಾನಹಾನಿ ಹೇಳಿಕೆ ಸಂಬಂಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ಗುರಿಯಾಗಿದ್ದು, ಲೋಕಸಭೆ ಸದಸ್ಯತ್ವದಿಂದಲೂ ಅನರ್ಹಗೊಂಡಿದ್ದಾರೆ. ಇದರಿಂದಾಗಿ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಮತ್ತು ದಾಖಲೆಗಳನ್ನು ಕೋರ್ಟ್‌‌ಗೆ ಒಪ್ಪಿಸಿದ್ದಾರೆ. ಹೀಗಾಗಿ, ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಎನ್ಒಸಿ ಕೋರಿ ನ್ಯಾಯಾಲಯಕ್ಕೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಮುಂದಿನ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

'ನಾನು ನಿಮ್ಮ ಅರ್ಜಿಯನ್ನು ಭಾಗಶಃ ಅನುಮತಿಸುತ್ತಿದ್ದೇನೆ. 10 ವರ್ಷವಲ್ಲ, ಮೂರು ವರ್ಷ' ಎಂದು ನ್ಯಾಯಾಧೀಶರು ರಾಹುಲ್ ಗಾಂಧಿ ಪರ ವಕೀಲರಿಗೆ ತಿಳಿಸಿದರು.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೂರುದಾರರಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಆರೋಪಿಯಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2015ರಲ್ಲಿ ದಾಖಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಹಾಗೂ ಇತರರು ಆರೋಪಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com