ಜವಾಹರಲಾಲ್ ನೆಹರು ಪುಣ್ಯತಿಥಿ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರಿಂದ ನಮನ
ಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.
Published: 27th May 2023 08:52 AM | Last Updated: 27th May 2023 08:59 AM | A+A A-

ಜವಾಹರಲಾಲ್ ನೆಹರೂ
ನವದೆಹಲಿ: ಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.
ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು.
#WATCH | Congress president Mallikarjun Kharge, party leaders Rahul Gandhi, KC Venugopal and others pay floral tribute to India’s first Prime Minister Jawaharlal Nehru on his death anniversary, at his memorial Shanti Van in Delhi. pic.twitter.com/VWJTEPKQXt
— ANI (@ANI) May 27, 2023
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪಂಡಿತ್ ಜವಾಹರಲಾಲ್ ನೆಹರು ಅವರ ಕೊಡುಗೆಯಿಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರರಾಗಿದ್ದ ಅವರ ಪ್ರಗತಿಪರ ಆಲೋಚನೆಗಳು ಸವಾಲುಗಳ ನಡುವೆಯೂ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲವಾಗಿ ಮುನ್ನಡೆಸಿದವು. ನೆಹರೂ ಅವರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.
ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.