ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರಗೀತೆ ಮೂಲಕ 2ನೇ ಹಂತದ ಕಾರ್ಯಕ್ರಮ ಆರಂಭ, ಗಣ್ಯಾತಿಗಣ್ಯರು ಭಾಗಿ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ.
ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ.
ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ.

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ರಾಜ್ಯಸಭಾ ಉಪಸಭಾಪತಿ ಹರಿವಂಶ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮ ಅತಿದೊಡ್ಡ ಪ್ರಜಾಪ್ರಭುತ್ವದ ದೇಗುಲವಾದ ನೂತನ ಸಂಸತ್​ ಅನ್ನು ಲೋಕಾರ್ಪಣೆಗೊಂಡಿದ್ದು, ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಕಡಿಮೆ ಸಮಯದಲ್ಲಿ ಭವಿಷ್ಯದ ದೃಷ್ಟಿಯಿಂದ ಸುಂದರವಾದ ಸಂಸತ್​​ ಅನ್ನು ನಿರ್ಮಿಸಿದ್ದಾರೆ. ಬಹಳ ಸುಂದರವಾದ ಭವನವಾಗಿದೆ. ಈ ಹಿಂದಿನ ಸಂಸತ ಭವನಕ್ಕಿಂತ ದೊಡ್ಡದಾಗಿದೆ. ಡಿಜಿಟಲ್​ ಸೌಲಭ್ಯ ಹೊಂದಿದೆ. ಆಜಾದಿ ಕಾ ಅಮೃತ ಕಾಲದಲ್ಲಿ ಈ ಸಂಸತ್​ ಭವನ ನಿರ್ಮಾಣ ಜಪ್ರತಿನಿಧಿಗಳಿಗೆ ಪ್ರೇರಣಾದಾಯಕವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​, ಪ್ರಲ್ಹಾದ್​​ ಜೋಶಿ ಮತ್ತು ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​  ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com