ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
Published: 29th May 2023 05:09 PM | Last Updated: 29th May 2023 07:20 PM | A+A A-

ಪ್ರೇಮಿ ಸೆರೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ನವದೆಹಲಿಯ ಶಹಾಬಾದ್ ಡೈರಿ ಪ್ರದೇಶದಲ್ಲಿ ಭಾನುವಾರ ಆಕೆಯ ಬಾಯ್ ಫ್ರೆಂಡ್ ನಿಂದಲೇ ಈ ಘಟನೆ ನಡೆದಿದ್ದು, ಆರೋಪಿ ಸಾಹಿಲ್ ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಾಹಿಲ್ ಮತ್ತು ಮೃತ ಅಪ್ರಾಪ್ತೆ ನಡುವೆ ಸಂಬಂಧವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ದಿನ ಇಬ್ಬರಿಗೂ ಜಗಳವಾಗಿದೆ. ನಂತರ ಆಕೆ ಬೀದಿಯಲ್ಲಿ ಹೋಗುತ್ತಿದ್ದಾಗ ಎದುರಾದ ಸಾಯಿಲ್ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ರವಿಕುಮಾರ್ ಸಿಂಗ್ ತಿಳಿಸಿದ್ದಾರೆ.
Sahil, accused of the 16-year-old girl murder case in Delhi has been arrested near Bulandshahr, Uttar Pradesh.
(Source: Police) pic.twitter.com/TtGnRAR37B— ANI (@ANI) May 29, 2023
ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ಆರು ತಂಡಗಳನ್ನು ರಚಿಸಲಾಗಿತ್ತು. ಉತ್ತರ ಪ್ರದೇಶದ ಬುಲಂದ್‌ಶಹರ್ ಬಳಿ ಇಂದು ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮೃತನ ತಂದೆ ನೀಡಿದ ದೂರಿನ ಮೇರೆಗೆ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗೆ ಕಠಿಣ ಶಿಕ್ಷೆ ನೀಡುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸುತ್ತೇವೆ ಎಂದು ದೆಹಲಿ ಪೊಲೀಸ್ ಅಧಿಕಾರಿ ದೇವೇಂದ್ರ ಪಾಠಕ್ ಹೇಳಿದ್ದಾರೆ. ಆಕೆಯ ತಲೆಯನ್ನು ತುಂಡುಗಳಾಗಿ ಕತ್ತರಿಸಲಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಪ್ರಾಪ್ತ ಬಾಲಕಿಯ ತಂದೆ ಒತ್ತಾಯಿಸಿದ್ದಾರೆ.
#WATCH | Delhi: "My daughter was stabbed many times, her head was also bludgeoned into pieces. We demand stringent punishment for the accused," says Father of the 16-year-old minor girl who was stabbed to death by 20-year-old accused, Sahil, in Shahbad dairy area pic.twitter.com/CkRJhXIAVx
— ANI (@ANI) May 29, 2023