ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!

ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.
ಖರ್ಗೆ, ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತಿತರರು
ಖರ್ಗೆ, ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತಿತರರು

ನವದೆಹಲಿ: ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರನ್ನು ಇಂದು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. 

ಈ ತಿಂಗಳ ಅಂತ್ಯದೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಮೂರು ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಆಂದೋಲನ ನಡೆಸುವುದಾಗಿ ಪೈಲಟ್ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಪೈಲಟ್ ಪಟ್ಟು ಹಿಡಿದಿದ್ದಾರೆ. 

ಮೇ 26 ರಂದು ಎಲ್ಲಾ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರ ಸಭೆಯನ್ನು ನಿಗದಿಪಡಿಸಲಾಗಿತ್ತು. ಆದರೆ ನಂತರ ಮುಂದೂಡಲಾಯಿತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅವರನ್ನು ಒಂದೇ ವೇದಿಕೆಗೆ ತರಲು ಈಗ ಹೈಕಮಾಂಡ್ ಗೆಹ್ಲೋಟ್ ಮತ್ತು ಪೈಲಟ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಬಿಕ್ಕಟ್ಟು ಪರಿಹಾರಕ್ಕೆ ಮುಂದಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಂದಿದ್ದಾರೆ. ಪಕ್ಷದ ಹಿತಾದೃಷ್ಟಿಯಿಂದ ಚರ್ಚಿಸಿ, ನಿರ್ಧರಿಸಲಾಗುವುದು ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com