ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ರಾಹುಲ್ ಗಾಂಧಿ
ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published: 29th May 2023 04:40 PM | Last Updated: 29th May 2023 07:18 PM | A+A A-

ರಾಹುಲ್ ಗಾಂಧಿ
ನವದೆಹಲಿ: ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಿದ್ಧತಾ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಗೆಲುವು ಸಾಧಿಸಿದ ನಂತರ ಮಧ್ಯ ಪ್ರದೇಶದಲ್ಲೂ ಪಕ್ಷದ ಗೆಲುವಿನ ಓಟ ಮುಂದುವರಿಯಲಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರದೇಶದ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರ ಜೊತೆ ಸಭೆ ನಡೆಸಿದರು.
ಇದನ್ನು ಓದಿ: ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ: ಮಧ್ಯ ಪ್ರದೇಶ ಸರ್ಕಾರದಿಂದ ಹಿರಿಯ ಯಾತ್ರಾರ್ಥಿಗಳಿಗೆ ಉಚಿತ ವಿಮಾನ ಸೇವೆ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನಾವು ಕರ್ನಾಟಕದಲ್ಲಿ 136 ಸ್ಥಾನ ಪಡೆದಿದ್ದೇವೆ. ಮುಂಬರುವ ಮಧ್ಯಪ್ರದೇಶ ಚುನಾವಣೆಯಲ್ಲಿ ನಾವು 150 ಸ್ಥಾನಗಳನ್ನು ಪಡೆಯಲಿದ್ದೇವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಎಐಸಿಸಿ ಉಸ್ತುವಾರಿ ಪಿ ಅಗರ್ವಾಲ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.