ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ...
ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ

ತಿರುವನಂತಪುರಂ: ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ" ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ಸಿಎಂ, ಇಂದು ಉದ್ದೇಶಪೂರ್ವಕವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಯತ್ನಗಳು ನಡೆಯುತ್ತಿದ್ದು, ಸಂಸತ್ತಿನ ಉದ್ಘಾಟನಾ ಸಮಾರಂಭವೇ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದರು.

ನಮ್ಮ ದೇಶದಲ್ಲಿ ಜಾತ್ಯತೀತತೆ ಮೇಲೆ ದಾಳಿ ನಡೆಯುತ್ತಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಒಪ್ಪಲು ಆರ್‌ಎಸ್‌ಎಸ್ ಸಿದ್ಧವಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ದೇಶವಾಗಿ ಬದಲಾಯಿಸಲು ಬಯಸುತ್ತಾರೆ. ಸಂಸತ್ತಿನಲ್ಲಿ ಧಾರ್ಮಿಕ ಸಮಾರಂಭ ನಡೆಯಬಾರದು ಎಂದು ಕೇರಳ ಸಿಎಂ ವಿಜಯನ್ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಸಂಸತ್ತಿನಲ್ಲಿ ನಿರ್ದಿಷ್ಟ ಧರ್ಮದ ಧಾರ್ಮಿಕ ಕಾರ್ಯಕ್ರಮ ನಡೆಯಬಾರದು. ಇದು ಜಾತ್ಯತೀತ ರಾಷ್ಟ್ರಕ್ಕೆ ಹೊಂದಿಕೆಯಾಗುವುದಿಲ್ಲ. ದೇಶ ಸಂದಿಗ್ಧ ಕಾಲವನ್ನು ಎದುರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com