ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ
ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ...
Published: 29th May 2023 08:22 PM | Last Updated: 29th May 2023 08:22 PM | A+A A-

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ.
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಸೋಮವಾರ ಹೇಳಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ, ಶೇಕಡಾ 99.9 ರಷ್ಟು ಎಫ್‌ಐಆರ್‌ಗಳಲ್ಲಿ ತಕ್ಷಣವೇ ಬಂಧಿಸಲಾಗುವುದಿಲ್ಲ ಮತ್ತು ಸಿಬಿಐ ಕೂಡ ಚಾರ್ಜ್‌ಶೀಟ್ ಸಲ್ಲಿಸುವಾಗ ಮಾತ್ರ ಬಂಧಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವಂತಿಲ್ಲ; ಬೇರೆ ಕಡೆ ಅವಕಾಶ: ದೆಹಲಿ ಪೊಲೀಸರು
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಣ್ಣಾಮಲೈ, "ಕುಸ್ತಿಪಟುಗಳು ಯಾವುದೇ ಪುರಾವೆಗಳನ್ನು ನೀಡಿಲ್ಲ. ಕೇವಲ ಆರೋಪ ಮಾಡಲಾಗಿದೆ... ಸರ್ಕಾರ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸಮಿತಿಯನ್ನು ರಚಿಸಿದೆ. ಕಾಲಮಿತಿಯೊಳಗೆ ತನಿಖೆ ನಡೆಸುವುದಾಗಿ ಹೇಳಿದೆ. ಆದರೆ ಪ್ರತಿಭಟನಾ ಸ್ಥಳ(ಜಂತರ್ ಮಂತರ್) ತೆರವುಗೊಳಿಸದೆ ಆರೋಪಿಯ ಬಂಧನಕ್ಕೆ ಒತ್ತಾಯಿಸುವುದು ಸರಿಯಲ್ಲ" ಎಂದರು.
ಕುಸ್ತಿಪಟುಗಳು ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದರೆ, ದೆಹಲಿ ಪೊಲೀಸರು ಆರೋಪಿ ವಿರುದ್ಧ ಕ್ರಮಕೈಗೊಳ್ಳಲು ಬದ್ಧರಾಗಿದ್ದಾರೆ ಎಂದು ಬಿಜೆಪಿ ನಾಯಕ ತಿಳಿಸಿದರು.
ಯಾವುದೇ ಒಬ್ಬ ಮಹಿಳೆ ಮತ್ತೊಬ್ಬರ ವಿರುದ್ಧ ಆರೋಪ ಮಾಡಿದ ತಕ್ಷಣ, ವಿಚಾರಣೆಗೆ ಮುನ್ನ ಬಂಧಿಸಿದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ಏನಾಗುತ್ತದೆ? ಎಂದು ಅಣ್ಣಾಮಲೈ ಪ್ರಶ್ನಿಸಿದರು.