ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಕೇಂದ್ರದ ಅನುಮತಿ ಕೋರಿದ ಮಮತಾ ಬ್ಯಾನರ್ಜಿ

ನಾನು ಮಣಿಪುರದ ಜನರೊಂದಿಗೆ ಇರಲು ಬಯಸುತ್ತೇನೆ. ನನಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವಕಾಶ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನಾನು ಮಣಿಪುರದ ಜನರೊಂದಿಗೆ ಇರಲು ಬಯಸುತ್ತೇನೆ. ನನಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವಕಾಶ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ನನಗೆ ಯಾವುದೇ ಪ್ರೋಟೋಕಾಲ್ ಅನ್ನು ಉಲ್ಲಂಘಿಸುವ ಉದ್ದೇಶವಿಲ್ಲ. ಆದರೆ ರಾಜ್ಯದ ಶಾಂತಿ-ಪ್ರೀತಿಯ ಜನರೊಂದಿಗೆ ಇರಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಈಶಾನ್ಯ ರಾಜ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಮಮತಾ ಬ್ಯಾನರ್ಜಿ ಅವರು, ಕೇಂದ್ರ ನಾಯಕರು ಮಣಿಪುರ ತಲುಪಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿದ ಅವರು, ದೇಶವು ಮಣಿಪುರದ ನೈಜ ಚಿತ್ರಣವನ್ನು ತಿಳಿಯಲು ಬಯಸಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಮಣಿಪುರದಂತಹ ಸಂಘರ್ಷವನ್ನು ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಕಳೆದ ವಾರ ಆರೋಪಿಸಿದ್ದರು.
ಮಣಿಪುರಕ್ಕೆ ಬರಲು, ಕೆಲಸ ಮಾಡಲು ಅಥವಾ ವ್ಯಾಪಾರ ಮಾಡಲು, ರಾಜ್ಯದ ಹೊರಗಿನ ಎಲ್ಲಾ ಜನರಿಗೆ ಇನ್ನರ್ ಲೈನ್ ಪರ್ಮಿಟ್ ಅಗತ್ಯವಿದೆ.
ಆದರೆ, ಅನುಮತಿ ನೀಡಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರವಲ್ಲ ಎಂದು ಹೇಳಿದ್ದರು. 

ಇತ್ತೀಚೆಗೆ ಮೇಘಾಲಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಟಿಎಂಸಿ ಐದು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ತ್ರಿಪುರಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷವು ಯಾವುದೇ ಯಶಸ್ಸನ್ನು ಸಾಧಿಸಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com