ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ
ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
Published: 30th May 2023 08:54 AM | Last Updated: 30th May 2023 01:59 PM | A+A A-

ಕಾಂಗ್ರೆಸ್ ಸಂಸದ ಬಾಲು ಧರ್ನೋಕರ್
ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದ ವಾರ ನಾಗ್ಪುರ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನವದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ. ಧರ್ನೋಕರ್ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.
Lok Sabha Speaker Om Birla expresses condolences on the demise of Congress Chandrapur MP Balu Dhanorkar. pic.twitter.com/2ofuQF4HYw
— ANI (@ANI) May 30, 2023
ಚಂದ್ರಾಪುರ ಜಿಲ್ಲೆಯಲ್ಲಿ ಬಾಳಾಸಾಹೇಬ್ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿ ತಮ್ಮ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದ ಧನೋಕರ್ 2014 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದಿದ್ದರು. ನಂತರ ಕಾಂಗ್ರೆಸ್ ಪಕ್ಷ ಸೇರಿ ಅದೇ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.