ಮೈಸೂರು ಬಳಿ ಅಪಘಾತಕ್ಕೆ 10 ಮಂದಿ ಸಾವು: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಿನ್ನೆ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದರು.
Published: 30th May 2023 08:29 AM | Last Updated: 30th May 2023 01:58 PM | A+A A-

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಮತ್ತು ವಾಹನ
ಮೈಸೂರು/ನವದೆಹಲಿ: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಿನ್ನೆ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದರು. ಅವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮತ್ತು ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಅಗಲಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರು ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಅದೇ ರೀತಿ ಜಾರ್ಖಂಡ್ ನ ಧನ್ ಬಾದ್ ನಲ್ಲಿ ಸಂಭವಿಸಿದ ದುರಂತದಲ್ಲಿ ಮತ್ತು ರಾಜಸ್ತಾನದ ಜುಂಜುನುದಲ್ಲಿ ಟ್ರ್ಯಾಕ್ಟರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಗಾಯಗೊಂಡವರಿಗೆ ಅಷ್ಟೇ ಮೊತ್ತದ ಪರಿಹಾರ ಘೋಷಿಸಲಾಗಿದೆ.
The Prime Minister has announced an ex-gratia of Rs. 2 lakh from PMNRF for the next of kin of those who have lost their lives in the tragedies in Mysuru and Dhanbad. The injured would be given Rs. 50,000.
— PMO India (@PMOIndia) May 29, 2023
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು.