ಪ್ರತಿಪಕ್ಷಗಳು ಒಗ್ಗೂಡಿದರೆ ಬಿಜೆಪಿ ಸೋಲಿಸಬಹುದು: ರಾಹುಲ್ ಗಾಂಧಿ
ಪ್ರತಿಪಕ್ಷಗಳು ಸೂಕ್ತರೀತಿಯಲ್ಲಿ ಹೊಂದಾಣಿಕೆ ಮಾಡಿಕೊಂಡರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೋಲಿಸಬಹುದು, ಕಾಂಗ್ರೆಸ್ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.
Published: 31st May 2023 02:30 PM | Last Updated: 16th August 2023 04:48 PM | A+A A-

ರಾಹುಲ್ ಗಾಂಧಿ
ಸಾಂಟಾ ಕ್ಲಾರಾ: ಪ್ರತಿಪಕ್ಷಗಳು ಸೂಕ್ತರೀತಿಯಲ್ಲಿ ಹೊಂದಾಣಿಕೆ ಮಾಡಿಕೊಂಡರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೋಲಿಸಬಹುದು, ಕಾಂಗ್ರೆಸ್ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.
ಸಾಂಟಾಕ್ರೂಜ್‌ನಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಿಲಿಕಾನ್ ವ್ಯಾಲಿ ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಿಜೆಪಿಯಲ್ಲಿನ ದುರ್ಬಲತೆಗಳು ಸ್ಪಷ್ಟವಾಗುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆ ಮಾಡಿಕೊಂಡಿದ್ದೇ ಆದರೆ, ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ, ಬಿಜೆಪಿ ವಿರುದ್ಧ ಹೋರಾಡಿ ಆ ಪಕ್ಷವನ್ನು ಸೋಲಿಸಬಹುದು ಎಂಬುದು ಅರಿವಿಗೆ ಬರುತ್ತಿದೆ. ಆದರೆ, ಈ ತಂತ್ರ ಅರ್ಥಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಭಿನ್ನವಾದ ವಿಧಾನವನ್ನು ಬಳಸಿತ್ತು. ಭಾರತ್ ಜೋಡೋ ಯಾತ್ರೆ ಬಳಿಕ ಈ ಬದಲಾವಣೆಗಳು ಕಂಡು ಬಂದವು ಎಂದು ತಿಳಿಸಿದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದರೆ, ಹಾಲಿ ಬಿಜೆಪಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.
ಇದನ್ನೂ ಓದಿ: ಪ್ರಧಾನಿ ಮೋದಿಯವರು ಬ್ರಹ್ಮಾಂಡ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ದೇವರಿಗೇ ವಿವರಿಸಬಲ್ಲರು: ರಾಹುಲ್ ವ್ಯಂಗ್ಯ
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ 10 ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿತ್ತು. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸುವುದು ಅಗತ್ಯವಿಗೆ. ಬಿಜೆಪಿ ಸೋಲಿಸಲು ಪ್ರತಿಪಕ್ಷಗಳ ಒಗ್ಗಟ್ಟು ಮಾತ್ರವಲ್ಲ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ ಎಂಬುದು ನನ್ನ ಅಭಿಪ್ರಾಯ.
ಭಾರತ್ ಜೋಡೋ ಯಾತ್ರೆಯ ಭಾಗವು ಅಂತಹ ದೃಷ್ಟಿಕೋನವನ್ನು ಪ್ರತಿಪಾದಿಸುವ ಮೊದಲ ಹೆಜ್ಜೆಯಾಗಿದೆ. ಇದು ಎಲ್ಲಾ ವಿರೋಧ ಪಕ್ಷಗಳು ಹೊಂದಿಕೊಂಡಿರುವ ದೃಷ್ಟಿಕೋನವಾಗಿದೆ. ಭಾರತ್ ಜೋಡೋ ಯಾತ್ರೆಯ ಕಲ್ಪನೆಯನ್ನು ಯಾವುದೇ ವಿರೋಧ ಪಕ್ಷವು ವಿರೋಧಿಸಲಿಲ್ಲ.
ಭಾರತ್ ಜೋಡೋ ಯಾತ್ರೆ (ಯುನೈಟ್ ಇಂಡಿಯಾ ಮಾರ್ಚ್) ಭಾರತವನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿರುವ ಸಾಮೂಹಿಕ ಚಳುವಳಿಯಾಗಿದೆ. ಯಾತ್ರೆಯು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು, 12 ರಾಜ್ಯಗಳ ಮೂಲಕ ಹಾದುಹೋಯಿತು. ಜನವರಿ 31 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಂಡಿತು.
ಯಾತ್ರೆ ವೇಳೆ 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಪ್ರಾದೇಶಿಕ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು ಎಂದು ಮಾಹಿತಿ ನೀಡಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು,
ಇವರು ದೇಶವನ್ನು ಜಾತಿ ಮತ್ತು ಧಾರ್ಮಿಕ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.