ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್
ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ.
Published: 31st May 2023 10:11 PM | Last Updated: 31st May 2023 10:11 PM | A+A A-

ಬ್ರಿಜ್ ಭೂಷಣ್ ಸಿಂಗ್
ಬಾರಾಬಂಕಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಈ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, 'ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ, ನಾನು ನೇಣು ಹಾಕಿಕೊಳ್ಳುತ್ತೇನೆ' ಎಂದು ಹೇಳಿದರು.
ಪ್ರತಿಭಟನೆಯ ಸಂಕೇತವಾಗಿ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಮುಳುಗಿಸುವುದಾಗಿ ಘೋಷಿಸಿದ್ದಕ್ಕಾಗಿ ಸಿಂಗ್ ಕುಸ್ತಿಪಟುಗಳನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಸಾಕ್ಷ್ಯ ಕೊರತೆ ಕುರಿತ ವರದಿ ತಪ್ಪು: ದೆಹಲಿ ಪೊಲೀಸ್
ನಾಲ್ಕು ತಿಂಗಳಾಗಿದೆ. ಇನ್ನು ಅವರು ನನ್ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರ ನನ್ನನ್ನು ಗಲ್ಲಿಗೇರಿಸಲು ಹೋಗುತ್ತಿಲ್ಲ. ಆದ್ದರಿಂದ ಅವರು ಮಂಗಳವಾರ ಹರಿದ್ವಾರದಲ್ಲಿ ಜಮಾಯಿಸಿ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಮುಳುಗಿಸುವುದಾಗಿ ಬೆದರಿಕೆ ಹಾಕಿದರು. ಇದು ನನಗೆ ಅವರು ಬಯಸುವ ಶಿಕ್ಷೆಯನ್ನು ತರುವುದಿಲ್ಲ. ಅದೆಲ್ಲ ಭಾವನಾತ್ಮಕ ನಾಟಕ ಎಂದು ಕಿಡಿಕಾರಿದರು.
ಕುಸ್ತಿಪಟುಗಳ ಬಳಿ ಯಾವುದೇ ಪುರಾವೆಗಳಿದ್ದರೆ ಅದನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ ಮತ್ತು ನಾನು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಸಿಂಗ್ ಹೇಳಿದರು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ ನನ್ನನ್ನು ಬಂಧಿಸಲಾಗುತ್ತಿತ್ತು ಎಂದರು.