ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಯಲು ಕೃತಕ ಮಳೆ ಸುರಿಸಲು ಚಿಂತನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರುತ್ತಿದ್ದು, ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು...
ದೆಹಲಿ ವಾಯು ಮಾಲಿನ್ಯ
ದೆಹಲಿ ವಾಯು ಮಾಲಿನ್ಯ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರುತ್ತಿದ್ದು, ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.

ಈ ಸಂಬಂಧ ಸಚಿವ ರೈ ಅವರು ಐಐಟಿ ಕಾನ್ಪುರ ವಿಜ್ಞಾನಿಗಳೊಂದಿಗೆ ಸಭೆ ನಡೆಸಿದ್ದು, ವಾತಾವರಣದಲ್ಲಿ ಮೋಡಗಳು ಅಥವಾ ತೇವಾಂಶವಿದ್ದರೆ ಮಾತ್ರ ಮೋಡ ಬಿತ್ತನೆ ಮಾಡಲು ಯತ್ನಿಸಬಹುದು ಎಂದಿದ್ದಾರೆ.

"ನವೆಂಬರ್ 20-21ರ ಸುಮಾರಿಗೆ ಮೋಡ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಲು ನಾವು ವಿಜ್ಞಾನಿಗಳಿಗೆ ಕೇಳಿಕೊಂಡಿದ್ದೇವೆ. ಅದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ.

ಇದೇ ವೇಳೆ, ಸುಪ್ರೀಂ ಕೋರ್ಟ್‌ ಆದೇಶದಂತೆ ದೆಹಲಿಗೆ ಆಪ್ ಆಧಾರಿತ ಟ್ಯಾಕ್ಸಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸಚಿವ ಗೋಪಾಲ್ ರೈ ಅವರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕಾರುಗಳಿಗೆ ಸಮ-ಬೆಸ ನಿಯಮ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೃತಕ ಮಳೆಯ ಕುರಿತು ಜಾಗತಿಕ ಮಟ್ಟದಲ್ಲಿ ಸಂಶೋಧನೆ ನಡೆಸಲಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ಪಿಟಿಐಗೆ ತಿಳಿಸಿದ್ದಾರೆ.

"ಭಾರತದಲ್ಲಿ... ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕೆಲವು ಪ್ರಯತ್ನಗಳು ನಡೆದಿವೆ. ಜಾಗತಿಕವಾಗಿ, ಕೃತಕ ಮಳೆಯ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ. ಇದಕ್ಕೆ ಮೋಡಗಳು ಅಥವಾ ತೇವಾಂಶದ ವಾತಾವರಣ ಅಗತ್ಯವಿರುತ್ತದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com