ಮರ್ಯಾದಾ ಹತ್ಯೆ: ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ್ದಕ್ಕೆ ಬಲವಂತವಾಗಿ ಕೀಟನಾಶಕ ಕುಡಿಸಿದ ತಂದೆ, ಅಪ್ರಾಪ್ತೆ ಸಾವು

ಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕೇರಳ ಪೊಲೀಸರು (ಪ್ರಾತಿನಿಧಿಕ ಚಿತ್ರ)
ಕೇರಳ ಪೊಲೀಸರು (ಪ್ರಾತಿನಿಧಿಕ ಚಿತ್ರ)

ಕೊಚ್ಚಿ: ಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಅಕ್ಟೋಬರ್ 29 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಲುವಾ ಪಶ್ಚಿಮ ಪೊಲೀಸರು 43 ವರ್ಷದ ಕರುಮಲ್ಲೂರು ಮೂಲದ ಆರೋಪಿಯನ್ನು ಬಂಧಿಸಿ ಕೊಲೆ ಯತ್ನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಆಕೆ ಪೀಡಿಯಾಟ್ರಿಕ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಬಹು ಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಸಂಜೆ 4.48ಕ್ಕೆ ಬಾಲಕಿಯ ಸಾವು ಸಂಭವಿಸಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಬುಧವಾರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಕಾಡುಂಗಲ್ಲೂರಿನ ಅದೇ ಶಾಲೆಯಲ್ಲಿ ಓದುತ್ತಿರುವ ಮತ್ತು ಬೇರೆ ಸಮುದಾಯಕ್ಕೆ ಸೇರಿದ ಹುಡುಗನೊಂದಿಗೆ ತನ್ನ ಮಗಳ ಸಂಬಂಧವನ್ನು ತಿಳಿದ ನಂತರ, ತಂದೆ ಆ ಸಂಬಂಧವನ್ನು ಕೊನೆಗೊಳಿಸುವಂತೆ ಬಾಲಕಿಗೆ ಹೇಳಿದ್ದಾರೆ.

ಆಕೆಯ ಮೊಬೈಲ್ ಫೋನ್ ಕೂಡ ವಶಪಡಿಸಿಕೊಂಡಿದ್ದಾರೆ. ಆದಾಗ್ಯೂ, ಒಂಬತ್ತನೇ ತರಗತಿಯ ಹುಡುಗಿ, ಆತನೊಂದಿಗೆ ಸಂಬಂಧವನ್ನು ಮುಂದುವರೆಸಿದ್ದಳು ಮತ್ತು ಇನ್ನೊಂದು ಫೋನ್ ಬಳಸಿ ಹುಡುಗನೊಂದಿಗೆ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ತಂದೆ ಕಬ್ಬಿಣದ ರಾಡ್‌ನಿಂದ ಆಕೆಯ ಕೈ ಮತ್ತು ಕಾಲುಗಳಿಗೆ ಥಳಿಸಿದ್ದಾನೆ ಮತ್ತು ಕೀಟನಾಶಕವನ್ನು ಬಲವಂತವಾಗಿ ಕುಡಿಸಿದ್ದಾನೆ. ಮೂರ್ಛೆ ಹೋದ ಬಾಲಕಿಯನ್ನು ಕುಟುಂಬದ ಇತರ ಸದಸ್ಯರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ. 

ಮರುದಿನ ಆಸ್ಪತ್ರೆಯಿಂದ ಪೊಲೀಸರಿಗೆ ಬಾಲಕಿ ಬಗ್ಗೆ ಮಾಹಿತಿ ಬಂದಿದೆ. ಆಸ್ಪತ್ರೆಯಲ್ಲಿಯೇ ಬಾಲಕಿಯ ಹೇಳಿಕೆ ದಾಖಲಿಸಿಕೊಡಂ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 

ಈಮಧ್ಯೆ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ವಿರುದ್ಧ ಕೊಲೆ ಆರೋಪ ಹೊರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com