ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರ!

ಶುಕ್ರವಾರ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ಶುಕ್ರವಾರ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಸಂತ್ರಸ್ತೆಯನ್ನು ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ  ಎಂದು ಎಎಸ್‌ಪಿ ರಾಮಚಂದ್ರ ಸಿಂಗ್ ನೆಹ್ರಾ ತಿಳಿಸಿದ್ದಾರೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈಮಧ್ಯೆ, ದೌಸಾ ಎಸ್‌ಪಿ ವಂದಿತಾ ರಾಣಾ ಮಾತನಾಡಿ, 'ಸಂತ್ರಸ್ತ ಬಾಲಕಿಯ ನಿಖರವಾದ ವಯಸ್ಸನ್ನು ವೈದ್ಯಕೀಯ ಪರೀಕ್ಷೆಯ ನಂತರ ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ವರದಿ ಆಧರಿಸಿ ನಿರ್ಧರಿಸಲಾಗುತ್ತದೆ. ಬಾಲಕಿಯ ಅಂದಾಜು ವಯಸ್ಸು ನಾಲ್ಕರಿಂದ ಐದು ವರ್ಷ' ಎಂದು ಹೇಳಿದರು.

ಘಟನೆ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಸ್ಥಳೀಯ ನಿವಾಸಿಗಳು, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರಾಹುವಾಸ್ ಪೊಲೀಸ್ ಠಾಣೆಗೆ ಘೇರಾವ್ ಹಾಕಿದರು.

ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಕೂಡ ಸ್ಥಳಕ್ಕೆ ತೆರಳಿದರು.

'ಲಾಲ್ಸೋಟ್‌ನಲ್ಲಿ ಏಳು ವರ್ಷದ ದಲಿತ ಬಾಲಕಿ ಮೇಲೆ ಪೋಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯ ಬಗ್ಗೆ ಜನರಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮುಗ್ಧ ಮಗುವಿಗೆ ನ್ಯಾಯ ದೊರಕಿಸಲು ನಾನು ಸ್ಥಳಕ್ಕೆ ಬಂದಿದ್ದೇನೆ' ಎಂದು ಮೀನಾ ಹೇಳಿದರು.

ಇನ್ನು ಅಶೋಕ್ ಗೆಹ್ಲೋಟ್ ಸರ್ಕಾರದ ಅದಕ್ಷತೆಯಿಂದ ನಿರಂಕುಶ ಪ್ರಭುತ್ವ ಸಾಧಿಸಿರುವ ಪೊಲೀಸರು ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲೂ ದೌರ್ಜನ್ಯ ಎಸಗಲು ಹಿಂದೇಟು ಹಾಕುತ್ತಿಲ್ಲ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com