ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ, ದಾಳಿಕೋರನನ್ನು ಹೊಡೆದು ಕೊಂದ ಜನ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆಕ್ರೋಶಗೊಂಡ ಜನರ ಗುಂಪೊಂದು ದಾಳಿಕೋರನನ್ನು ಹಿಡಿದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆಕ್ರೋಶಗೊಂಡ ಜನರ ಗುಂಪೊಂದು ದಾಳಿಕೋರನನ್ನು ಹಿಡಿದು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  
ಜೋಯ್‌ನಗರದ ಬಮುಂಗಾಚಿ ಪ್ರದೇಶದ ಟಿಎಂಸಿ ಅಧ್ಯಕ್ಷ ಸೈಫುದ್ದೀನ್ ಲಸ್ಕರ್ ಅವರನ್ನು ಕೆಲವು ದುಷ್ಕರ್ಮಿಗಳು ಅವರ ಮನೆಯ ಬಳಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಲಸ್ಕರ್ ಅವರ ಪತ್ನಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು, ಅವರ ಬೆಂಬಲಿಗರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಹೊಡೆದು ಕೊಂದಿದ್ದಾರೆ.

ಲಸ್ಕರ್ ಹತ್ಯೆಯ ಹಿಂದೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಬೆಂಬಲಿಗರ ಕೈವಾಡವಿದೆ ಎಂದು ಸ್ಥಳೀಯ ಟಿಎಂಸಿ ಮುಖಂಡರು ಆರೋಪಿಸಿದ್ದಾರೆ.  ಆದರೆ, ಸಿಪಿಎಂ ನಾಯಕ ಸುಜನ್ ಚಕ್ರವರ್ತಿ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದು, ಟಿಎಂಸಿಯ ಆಂತರಿಕ ಕಲಹವೇ ಲಸ್ಕರ್‌ ಅವರ ಹತ್ಯೆಗೆ ಕಾರಣ. ಸಿಪಿಎಂ ಅನ್ನು ದೂಷಿಸಿ ಪ್ರಯೋಜನವಿಲ್ಲ. ಪೊಲೀಸರು ಸೂಕ್ತ ತನಿಖೆ ನಡೆಸಿ ಪಿತೂರಿಯನ್ನು ಬಯಲಿಗೆಳೆಯಬೇಕು ಎಂದು ಹೇಳಿದ್ದಾರೆ.

ಟಿಎಂಸಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com