ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ

ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಮತಗಟ್ಟೆ ತಂಡವೊಂದು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಸ್ಫೋಟ ಸಂಭವಿಸಿದೆ
ಮತಗಟ್ಟೆ ತಂಡವೊಂದು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಸ್ಫೋಟ ಸಂಭವಿಸಿದೆ
Updated on

ಗರಿಯಾಬಂದ್: ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲೀಯರು ಸ್ಫೋಟವನ್ನು ಪ್ರಚೋದಿಸಿದ್ದು, ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. 

ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಶುಕ್ರವಾರ ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ನವೆಂಬರ್ 7 ರಂದು ಮೊದಲ ಹಂತದ ಚುನಾವಣೆ ನಡೆದಿದ್ದು, ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com