ಮತ್ತೆ 83 ಅಂಗಡಿ, ವಾಣಿಜ್ಯ ಸಂಸ್ಥೆಗಳಿಗೆ 24x7 ಕಾರ್ಯನಿರ್ವಹಿಸಲು ದೆಹಲಿ ಸಿಎಂ ಅನುಮತಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ 83 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದಾರೆ.
Published: 19th November 2023 07:35 PM | Last Updated: 19th November 2023 07:35 PM | A+A A-

ಅರವಿಂದ್ ಕೇಜ್ರಿವಾಲ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ 83 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ ನಂತರ, ಈ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಕೇಜ್ರಿವಾಲ್ ರನ್ನು ಬಂಧಿಸಿದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ಆಪ್ ಶಾಸಕರ ಆಗ್ರಹ
ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಸಂಖ್ಯೆ 635ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
1954 ರಿಂದ 2022 ರವರೆಗೆ ಕೇವಲ 269 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಮಾತ್ರ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ಅನುಮತಿಸಲಾಗಿತ್ತು.
24 ಗಂಟೆಗಳ ಕಾಲ ಈ ವಾಣಿಜ್ಯ ಸಂಸ್ಥೆಗಳ ಕಾರ್ಯನಿರ್ವಹಿಸುವುದರಿಂದ ಆರ್ಥಿಕತೆಯನ್ನು ಹೆಚ್ಚಿಸುವುದಲ್ಲದೆ, ಯುವಜನರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.