ಕೌಶಲ ಅಭಿವೃದ್ಧಿ ನಿಗಮ ಹಗರಣ: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರು
ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.
Published: 20th November 2023 04:28 PM | Last Updated: 20th November 2023 04:28 PM | A+A A-

ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ: ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.
ಸದ್ಯ ನಾಯ್ಡು ಅವರು ನ.28 ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವರದಿಯಾಗಿದೆ. ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದ ಒಂದು ದಿನದ ನಂತರ ಸೆಪ್ಟೆಂಬರ್ 10 ರಿಂದ ಅವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು ಮತ್ತು ವಿಜಯವಾಡದ ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಇದನ್ನೂ ಓದಿ: ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು ಸಿಎಂ ಆಗಿದ್ದಾಗ ಆಂಧ್ರಪ್ರದೇಶದಾದ್ಯಂತ ಕೌಶಲ ಕೇಂದ್ರಗಳನ್ನು ತೆರೆಯುವಲ್ಲಿ ನಿಗಮಕ್ಕೆ ಬಿಡುಗಡೆಯಾಗಿದ್ದ ಸುಮಾರು 3,300 ರು. ಕೋಟಿ ಹಣದಲ್ಲಿ ನಾಯ್ಡು ಅವರಿಂದ ಸರ್ಕಾರಕ್ಕೆ 371ಕೋಟಿ ವಂಚನೆ ಆಗಿದೆ’ ಎಂಬ ಆರೋಪದ ಮೇಲೆ ಸಿಐಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ನಾಯ್ಡು 3ನೇ ಆರೋಪಿಯಾಗಿದ್ದಾರೆ.
ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸೋಮವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.