ಜ್ಞಾನವಾಪಿ ಮಸೀದಿ
ದೇಶ
ಜ್ಞಾನವಾಪಿ ಸಮೀಕ್ಷೆ: ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ವಾರಣಾಸಿ ಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.
ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.
ಈ ಹಿಂದೆ ವರದಿ ಸಲ್ಲಿಸಲು ಎಎಸ್‌ಐಗೆ ನವೆಂಬರ್ 17 ರವರೆಗೆ ಸಮಯ ನೀಡಲಾಗಿತ್ತು. ಆದರೆ ಎಎಸ್ಐ ಪರ ವಕೀಲರು 15 ದಿನಗಳ ಕಾಲಾವಕಾಶ ಕೋರಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ.
ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ