ಉತ್ತರ ಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಹೈದರಾಬಾದ್‌ನಲ್ಲಿ ಅತ್ಯಾಚಾರ; ಆರೋಪಿ ಬಂಧನ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಯನ್ನು ಅಪಹರಿಸಿ ಹೈದರಾಬಾದ್‌ಗೆ ಕರೆದೊಯ್ದು, ಸುಮಾರು ಒಂದು ವಾರಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಯನ್ನು ಅಪಹರಿಸಿ ಹೈದರಾಬಾದ್‌ಗೆ ಕರೆದೊಯ್ದು, ಸುಮಾರು ಒಂದು ವಾರಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನವೆಂಬರ್ 25 ರಂದು ಬಲಿಯಾದ ಮಣಿಯಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ರಕ್ಷಿಸಲಾಗಿದೆ. ಆದರೆ ಆರೋಪಿಯನ್ನು ಯುವಕ(19)ನನ್ನು ನವೆಂಬರ್ 27 ರಂದು ಸ್ಥಳೀಯ ಬಸ್ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಈ ಯುವಕ ಬಾಲಕಿಯ ನೆರೆಹೊರೆಯಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 18 ರಂದು ಬಾಲಕಿಯನ್ನು ಅಪಹರಿಸಲಾಗಿತ್ತು ಮತ್ತು ಆಕೆಯ ತಂದೆಯ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮನಿಯಾರ್ ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ) ಮಂತೋಷ್ ಸಿಂಗ್ ಅವರು ಹೇಳಿದ್ದಾರೆ.

ಬಾಲಕಿಯ ಹೇಳಿಕೆಯಲ್ಲಿ, ಆರೋಪಿ ಯುವಕ ತನ್ನನ್ನು ಅಪಹರಿಸಿ, ಹೈದರಾಬಾದ್‌ಗೆ ಕರೆದೊಯ್ದು ಸುಮಾರು ಒಂದು ವಾರಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿರುವುದಾಗಿ ಎಸ್‌ಎಚ್‌ಒ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com