ಸಂಬಂಧದಲ್ಲಿದ್ದ ಮಹಿಳೆ ಮದುವೆಗೆ ನಿರಾಕರಣೆ: ಬ್ಲೇಡ್ ನಿಂದ ಕತ್ತು ಸೀಳಿದ ಪಾಗಲ್ ಪ್ರೇಮಿ

ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದು ಅಲ್ಲದೆ ಅವಮಾನಿಸಿದಳು ಎಂಬ ಕಾರಣ ಮುಂಬೈನಲ್ಲಿ ವ್ಯಕ್ತಿಯೊಬ್ಬ ಬ್ಲೇಡ್‌ನಿಂದ   25 ವರ್ಷದ ಮಹಿಳೆಯ ಕತ್ತು ಸೀಳಿದ್ದಾನೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದು ಅಲ್ಲದೆ ಅವಮಾನಿಸಿದಳು ಎಂಬ ಕಾರಣ ಮುಂಬೈನಲ್ಲಿ ವ್ಯಕ್ತಿಯೊಬ್ಬ ಬ್ಲೇಡ್‌ನಿಂದ   25 ವರ್ಷದ ಮಹಿಳೆಯ ಕತ್ತು ಸೀಳಿದ್ದಾನೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಕಲಾಚೌಕಿ ಪ್ರದೇಶದ ಮಹಿಳೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಕಲಚೌಕಿ ಪ್ರದೇಶದ ಪರಶುರಾಮ್ ನಗರದ ನಿವಾಸಿಯಾಗಿರುವ ಡ್ರೈವರ್ 44 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ತನ್ನ ಇಬ್ಬರು ಸಹೋದರರೊಂದಿಗೆ ಅದೇ ಪ್ರದೇಶದಲ್ಲಿ ವಾಸವಾಗಿದ್ದಳು. ತನಿಖೆಯ ವೇಳೆ ಆರೋಪಿ ಮಹಿಳೆಯೊಂದಿಗೆ ಒಂದು ವರ್ಷದಿಂದ ಸಂಬಂಧ ಹೊಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇನ್ನು ಅವಳನ್ನು ಮದುವೆಯಾಗಲು ಆರೋಪಿ ಬಯಸಿದ್ದನು. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸುತ್ತಿದ್ದಳು.

ಸೋಮವಾರ ರಾತ್ರಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೆಲವರ ಸಮ್ಮುಖದಲ್ಲಿ ಮಹಿಳೆ ಆತನನ್ನು ನಿಂದಿಸಿದ್ದಳು. ಹೀಗಾಗಿ ಮಂಗಳವಾರ ಮಧ್ಯಾಹ್ನ ಆರೋಪಿ ಮಹಿಳೆಯ ಮನೆಗೆ ನುಗ್ಗಿ ಬ್ಲೇಡ್‌ನಿಂದ ಕತ್ತು ಸೀಳಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಕೆಯ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಆಕೆಯ ಮನೆಗೆ ಬಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಮಹಿಳೆಯನ್ನು ಕೆಇಎಂ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಪ್ರಜ್ಞಾಹೀನಳಾಗಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದ್ದು, ನಿನ್ನೆ ರಾತ್ರಿ ಪರಶುರಾಮ್ ನಗರದಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 307 (ಕೊಲೆ ಯತ್ನ) ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com