ಕೇರಳ: ಪೆರಿಯಾರ್ ನದಿಗೆ ಉರುಳಿಬಿದ್ದ ಕಾರು, ಇಬ್ಬರು ಯುವ ವೈದ್ಯರ ಸಾವು!
ಕಾರೊಂದು ಪೆರಿಯಾರ್ ನದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಯುವ ವೈದ್ಯರು ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿ ಬಳಿಯ ಗೋತುರುತ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 01st October 2023 05:03 PM | Last Updated: 01st October 2023 05:04 PM | A+A A-

ಸಾಂದರ್ಭಿಕ ಚಿತ್ರ
ಕೊಚ್ಚಿ: ಕಾರೊಂದು ಪೆರಿಯಾರ್ ನದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಯುವ ವೈದ್ಯರು ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿ ಬಳಿಯ ಗೋತುರುತ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ 12.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅದ್ವೈತ್ (29) ಮತ್ತು ಅಜ್ಮಲ್ (29) ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಇತರ ಮೂವರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಾರು ಚಾಲಕ ಗೂಗಲ್ ಮ್ಯಾಪ್‌ನ ನಿರ್ದೇಶನ ಅನುಸರಿಸಿ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಭಾರಿ ಮಳೆ ಮತ್ತು ಅಸ್ಪಷ್ಟತ ಗೋಚರತೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಪರಿ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ರಕ್ಷಣೆಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.