ಜಮ್ಮು ಮತ್ತು ಕಾಶ್ಮೀರ: ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಯೋಧನರಿಗೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Published: 03rd October 2023 11:52 AM | Last Updated: 03rd October 2023 12:44 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಯೋಧನರಿಗೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅನುಮಾನಾಸ್ಪದ ಚಲನವಲನದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಸೋಮವಾರ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿತ್ತು.
ಇದನ್ನೂ ಓದಿ: ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಇಬ್ಬರು ಯೋಧರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.