ನವದೆಹಲಿ:'ನ್ಯೂಸ್‌ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!
ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Published: 03rd October 2023 09:13 PM | Last Updated: 03rd October 2023 09:16 PM | A+A A-

ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ
ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೆಲ್ ನಲ್ಲಿ ದಾಖಲಾಗಿರುವ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ-ಎನ್ ಸಿಆರ್ ನ 37ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಲವಾರು ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದ್ದು, ಫೋನ್ ಮತ್ತು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇದುವರೆಗೆ ಇಬ್ಬರು ಆರೋಪಿಗಳಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಒಟ್ಟು 37 ಪುರುಷರು, 9 ಮಹಿಳಾ ಶಂಕಿತರನ್ನು ಅವರ ಮನೆಗಳಲ್ಲಿ ವಿಚಾರಣೆ ನಡೆಸಲಾಗಿದೆ ಮತ್ತು ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತಿತರ ವಸ್ತುಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Delhi: Journalist Paranjoy Guha Thakurta working as a consultant with NewsClick says, "Nine police personnel came to my home in Gurugram at 6:30 in the morning. They asked me various questions. I came with them voluntarily to the Special Cell of the Delhi Police. The… pic.twitter.com/kgWCR1iWSG
— ANI (@ANI) October 3, 2023