ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಇನ್ನೂ 6 ಸಾವು!

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಏರಿಕೆಯಾಗಿದ್ದು, ನಾಂದೇಡ್ ನ ವೈದ್ಯಕೀಯ ಕಾಲೇಜಿನಲ್ಲಿ ಇನ್ನೂ 6 ಮಂದಿ ಸಾವನ್ನಪ್ಪಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ನವದೆಹಲಿ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಏರಿಕೆಯಾಗಿದ್ದು, ನಾಂದೇಡ್ ನ ವೈದ್ಯಕೀಯ ಕಾಲೇಜಿನಲ್ಲಿ ಇನ್ನೂ 6 ಮಂದಿ ಸಾವನ್ನಪ್ಪಿದ್ದಾರೆ.

6 ಮಂದಿ ಪೈಕಿ ಅವಧಿಪೂರ್ವ ಜನಿಸಿದ ಇಬ್ಬರು ಮಕ್ಕಳೂ ಸೇರಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ. ಈ ವಾರದ ಆರಂಭದಲ್ಲಿ 48 ಗಂಟೆಗಳಲ್ಲಿ 31 ರೋಗಿಗಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವರದಿಯಿಂದ ಉಂಟಾದ ಕೋಲಾಹಲದ ನಡುವೆ ಈ ಬೆಳವಣಿಗೆ ನಡೆದಿದೆ.

ಅಕ್ಟೋಬರ್ 2-3 ದಿನಾಂಕದ ನಡುವೆ ಇನ್ನೂ 6 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಎರಡು ಶಿಶುಗಳು ಅವಧಿಪೂರ್ವವಾಗಿ ಜನಿಸಿದವು. ಉಳಿದ ನಾಲ್ಕು ಸಾವುಗಳು ಮೂತ್ರಪಿಂಡ ವೈಫಲ್ಯ ಮತ್ತು ಬಹು ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಂಭವಿಸಿವೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದರು. ಅಧಿಕೃತ ಪ್ರಕಟಣೆಯ ಪ್ರಕಾರ ಅಕ್ಟೋಬರ್ 2 ರಿಂದ 3 ರವರೆಗೆ 221 ಹೊಸ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ 823 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com