ಎಎಪಿ ಸಂಸದ ಸಂಜಯ್ ಸಿಂಗ್
ಎಎಪಿ ಸಂಸದ ಸಂಜಯ್ ಸಿಂಗ್

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಐದು ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಗುರುವಾರ...
Published on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಗುರುವಾರ ಆದೇಶಿಸಿದೆ.

ಬಂಧಿತ ಸಂಜಯ್ ಸಿಂಗ್ ಅವರನ್ನು ಇಡಿ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನಗಳ ಕಾಲ ತನ್ನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ ಕೋರ್ಟ್ ಸಂಜಯ್ ಸಿಂಗ್ ಅವರನ್ನು ಐದು ದಿನ ಮಾತ್ರ ಇಡಿ ವಶಕ್ಕೆ ನೀಡಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಿನ್ನೆ ಬೆಳಗ್ಗೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

ಅಬಕಾರಿ ನೀತಿ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಗಳಲ್ಲಿ ಸಂಜಯ್ ಸಿಂಗ್ ಅವರ ಹೆಸರು ಇಲ್ಲ. ಆದರೆ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಂಜಯ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದರು. ಇದರ ಆಧಾರದಲ್ಲಿ ಇಡಿ ದಾಳಿ ನಡೆಸಿದೆ.

ಲಿಕ್ಕರ್ ನೀತಿಯಲ್ಲಿ ಲಾಬಿ ನಡೆಸಲು ಹಾಗೂ ಕಿಕ್ ಬ್ಯಾಕ್ ಚಟುವಟಿಕೆಗಳಲ್ಲಿ ಉದ್ಯಮಿ ದಿನೇಶ್ ಅರೋರಾ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com