ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿಯ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಕೇಂದ್ರ ಚುನಾವಣಾ ಆಯೋಗ ಸೋಮವಾರ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ಸಾಂದರ್ಭಿಕ ಚಿತ್ರ
ಬಿಜೆಪಿ ಸಾಂದರ್ಭಿಕ ಚಿತ್ರ

ಜೈಪುರ: ಕೇಂದ್ರ ಚುನಾವಣಾ ಆಯೋಗ ಸೋಮವಾರ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ರಾಜಸ್ಥಾನದ ಏಳು ಬಿಜೆಪಿ ಸಂಸದರ ಪೈಕಿ ಇಬ್ಬರು ಸಂಸದರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ರಾಜಸಮಂದ್ ಸಂಸದೆ ದಿಯಾ ಕುಮಾರಿ ಮತ್ತು ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಸೇರಿದಂತೆ 41 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

ಜೈಪುರದ ವಿದ್ಯಾಧರ್ ನಗರ ಕ್ಷೇತ್ರದಿಂದ ದಿಯಾ ಕುಮಾರಿ ಸ್ಪರ್ಧಿಸಲಿದ್ದು, ಮಾಜಿ ಕೇಂದ್ರ ಸಚಿವ ಮತ್ತು ನಿವೃತ್ತ ಸೇನಾ ಅಧಿಕಾರಿ ರಾಥೋಡ್ ಅವರು ಜೈಪುರ ಜಿಲ್ಲೆಯ ಝೋತ್ವಾರಾದಿಂದ ಕಣಕ್ಕಿಳಿಯಲಿದ್ದಾರೆ.

ವಿಧ್ಯಾಧರ್ ನಗರ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿ ಶಾಸಕ ನರ್ಪತ್ ಸಿಂಗ್ ರಾಜ್ವಿ ಪ್ರತಿನಿಧಿಸುತ್ತಿದ್ದಾರೆ. ಐದು ಬಾರಿ ಶಾಸಕರಾಗಿರುವ ನರ್ಪತ್ ಸಿಂಗ್ ರಾಜ್ವಿ ಅವರು ಮಾಜಿ ಉಪ ರಾಷ್ಟ್ರತಿ ಭೈರೋನ್ ಸಿಂಗ್ ಶೇಖಾವತ್ ಅವರ ಅಳಿಯ.

41 ಅಭ್ಯರ್ಥಿಗಳ ಪೈಕಿ ಕೇವಲ ಮೂವರು ಮಹಿಳೆಯರಿದ್ದು, ಆರು ಎಸ್‌ಸಿ ಮತ್ತು 10 ಎಸ್‌ಟಿ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com