ನವದೆಹಲಿಯಲ್ಲಿ ತೀವ್ರಗೊಂಡ ಎಎಪಿ ವರ್ಸಸ್ ಬಿಜೆಪಿ ಪ್ರತಿಭಟನೆ!

ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಹಾಗೂ ಬಿಜೆಪಿ ನಡುವಿನ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಮುಂಜಾನೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ನಿವಾಸದ ಮೇಲೆ ಇಡಿ ದಾಳಿ ನಂತರ ಅರವಿಂದ್ ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದರು.
ಬಿಜೆಪಿ- ಎಎಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ- ಎಎಪಿ ಕಾರ್ಯಕರ್ತರ ಪ್ರತಿಭಟನೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಹಾಗೂ ಬಿಜೆಪಿ ನಡುವೆ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಮುಂಜಾನೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ನಿವಾಸದ ಮೇಲೆ ಇಡಿ ದಾಳಿ ನಂತರ ಅರವಿಂದ್ ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದರು.

ಪ್ರಮುಖ ವೃತ್ತಗಳು ಮತ್ತಿತರ ಕಡೆಗಳಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮದ್ಯ ಹಗರಣ ಸೇರಿದಂತೆ ಎಎಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಐಟಿಒ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ದೆಹಲಿ ಘಟಕದ ಮುಖ್ಯಸ್ಥ ವಿರೇಂದ್ರ ಸಚ್ ದೇವಾ, ಎಎಪಿ ಮತ್ತು ಕೇಜ್ರಿವಾಲ್ ಅವರ ನಿಜವಾದ ಮುಖ ಈಗ ಬಯಲಾಗಿದೆ. ಎಎಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಪಕ್ಷದ ಇತರ ನಾಯಕರಂತೆ ಕೇಜ್ರಿವಾಲ್ ಕೂಡಾ ಜೈಲು ಸೇರಲಿದ್ದಾರೆ ಎಂದರು. 

ಮತ್ತೊಂದೆಡೆ ಬಿಜೆಪಿ ವಿರುದ್ಧವಾಗಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಪಕ್ಷದ ಎಂಪಿ ಸಂಜಯ್ ಸಿಂಗ್ ಬಂಧನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಎಎಪಿ ಕಾರ್ಯಕರ್ತರು, ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ಟೋಬರ್ 4 ರಂದು ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಇಡಿ ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com